Connect with us

Hi, what are you looking for?

Diksoochi News

ರಾಜ್ಯ

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ವೀಡಿಯೋ ರೆಕಾರ್ಡ್; ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾತ ಅರೆಸ್ಟ್

0

ಬೆಂಗಳೂರು : ಬೆಂಗಳೂರು ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ವೀಡಿಯೋ ಮಾಡಿ, ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವೀಡಿಯೋಗಳನ್ನು ರಹಸ್ಯವಾಗಿ ಈತ ಸೆರೆ ಹಿಡಿಯುತ್ತಿದ್ದ. ಬಳಿಕ ತನ್ನ ಸೋಶಿಯಲ್‌ ಮೀಡಿಯಾ ಪೇಜ್‌ಗಳಲ್ಲಿ ಪೋಸ್ಟ್‌ ಮಾಡುತ್ತಿದ್ದ. ಶುಕ್ರವಾರ(ಮೇ.23) ಮಧ್ಯಾಹ್ನ ಆರೋಪಿಯನ್ನು ಆತನ ಮನೆಯಿಂದ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

27 ವರ್ಷದ ದಿಗಂತ ಬಂಧಿತ.
ಮೂಲತಃ ಹಾಸನ ಜಿಲ್ಲೆಯ ಹೊಳೆನರಸಿಪುರದ ದಿಗಂತ್ ತಿಗಳರ ಪಾಳ್ಯದಲ್ಲಿ ಕುಟುಂಬದೊಂದಿಗೆ ವಾಸಿಸುತ್ತಿದ್ದ.
ವಾಣಿಜ್ಯ ಪದವೀಧರನಾಗಿದ್ದ ಈತ ಮುರುಗೇಶಪಾಳ್ಯದ ಖಾಸಗಿ ಕಂಪನಿಯಲ್ಲಿ ಆಕೌಂಟ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Advertisement. Scroll to continue reading.

ಆರೋಪಿ ಪ್ರತಿದಿನ ಪೀಣ್ಯದಿಂದ ಇಂದಿರಾನಗರಕ್ಕೆ ತನ್ನ ಕೆಲಸಕ್ಕಾಗಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದನ. ಪ್ರಯಾಣ ಮಾಡುವಾಗ ಮೆಟ್ರೋ ರೈಲಿನಲ್ಲಿರುತ್ತಿದ್ದ ಮಹಿಳಾ ಪ್ರಯಾಣಿಕರ ಅವರಿಗೆ ತಿಳಿಯದಂತೆ ವೀಡಿಯೋ ಚಿತ್ರೀಕರಿಸುತ್ತಿದ್ದ ಎಂದು ಹೇಳಲಾಗಿದೆ.
ವಿಡಿಯೋಗಳನ್ನು Metro Chicks ಎಂಬ ತನ್ನ ಇನ್‌ಸ್ಟಾಗ್ರಾಮ್ ಮತ್ತು ಟೆಲಿಗ್ರಾಮ್‌ ಖಾತೆಯಲ್ಲಿ ಅಪ್‌ಲೋಡ್ ಮಾಡುತ್ತಿದ್ದ.

ಈ ವೀಡಿಯೋಗಳು ವೈರಲ್ ಆಗುತ್ತಲೇ ಕೂಡಲೇ ಆರೋಪಿಯನ್ನು ಬಂಧಿಸುವಂತೆ ಮೆಟ್ರೋ ಪ್ರಯಾಣಿಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದರು. ಆ ಪೇಜ್‌ನ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡು ಬೆಂಗಳೂರು ಪೊಲೀಸರಿಗೆ ಟ್ಯಾಗ್‌ ಮಾಡಿದ್ದರು. ಬನಶಂಕರಿ ಪೊಲೀಸರು ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಆ ಪೇಜ್‌ ರಿಪೋರ್ಟ್‌ ಕೂಡ ಮಾಡಲಾಗಿತ್ತು.


ವಿಚಾರ ಗೊತ್ತಾಗುತ್ತಿದ್ದಂತೆ ಖದೀಮ ಪೇಜ್‌ನಲ್ಲಿದ್ದ ವಿಡಿಯೋಗಳನ್ನು ಡಿಲೀಟ್‌ ಮಾಡಿದ್ದ. ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!