ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಮೇ. 27 ರಂದು ರೆಡ್ – ಅಲರ್ಟ್ ಘೋಷಣೆಯಾಗಿದೆ.
ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಮೇ. 27 ಮತ್ತು 28 ರಂದು ರಜೆಯನ್ನು ಘೋಷಿಸಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ. ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.
Advertisement. Scroll to continue reading.

In this article:diksoochi, Diksoochi news, Featured, karavali rain, karavalinews, rain

Click to comment