ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ.ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಹಲವೆಡೆ ನೆರೆ ಪರಿಸ್ಥಿತಿಯಿದೆ. ಹಲವು ಮನೆಗಳಿಗೆ ಹಾನಿಯಾಗಿದ್ದು, ಗುಡ್ಡ ಕುಸಿತ, ತಡೆಗೋಡೆ ಕು*ಸಿತ ವರದಿಯಾಗಿದೆ.
ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆ ಇದೆ. ಹಾಗಾಗಿ ನಾಳೆ(ಮೇ.31)ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ.31 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, (ಸಿಬಿಎಸ್ ಇ, ಐಸಿಎಸ್ ಇ ಸೇರಿದಂತೆ), ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದ್ದು, ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.
Advertisement. Scroll to continue reading.
