ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿಪೂರ್ವ ಕಾಲೇಜು, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
Advertisement. Scroll to continue reading.