ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಲಾಯಿತು. ಸಂತ ಮೇರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಹೆರಾಲ್ಡ್ ಮೊನೀಸ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲೇ ಭವಿಷ್ಯದ ಬಗ್ಗೆ ಸ್ಪಷ್ಟ ನಿಲುವು ಹೊಂದಿರಬೇಕು. ಯಶಸ್ಸಿಗೆ ಶಿಸ್ತು, ಸಂಯಮ ಮತ್ತು ಪರಿಶ್ರಮಗಳೇ ರಹದಾರಿ. ವಾಣಿಜ್ಯ ಸಂಘದ ಕ್ರಿಯಾತ್ಮಕ ಚಟುವಟಿಕೆಗಳಿಂದ ನಿಮ್ಮ ವ್ಯಕ್ತಿತ್ವ ವಿಕಸನಗೊಳ್ಳಲಿ ಎಂದು ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಜಯಶಂಕರ್.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಶಾಲಿನಿ ಲೋಬೊ, ರೋಯ್ ಸ್ಟನ್ ಕ್ವಾಡ್ರಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಅಶ್ವಿತ್ ಪೂಜಾರಿ ಸ್ವಾಗತಿಸಿ, ರಕ್ಷಿತ್ ವಂದಿಸಿದರು. ಮಾಲನಬಿ ಕಾರ್ಯಕ್ರಮವನ್ನು ನಿರೂಪಿಸಿದರು.
Advertisement. Scroll to continue reading.



































