ಮಣಿಪಾಲ : ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ರವರ 130 ನೇ ಜನ್ಮದಿನಾಚರಣೆ ಪ್ರಯುಕ್ತ ಮಣಿಪಾಲ ಸರಳೇಬೆಟ್ಟು ವಾರ್ಡ್ ನೆಹರೂ ನಗರದ ಕೊರಗ ಕಾಲೋನಿಯಲ್ಲಿ ನಿರಾಶ್ರಿತರಿಗೆ ಮನೆ ನಿರ್ಮಾಣಕ್ಕೆ ಶಾಸಕ ಕೆ.ರಘುಪತಿ ಭಟ್ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್, ರಾಜ್ಯ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ದಿನಕರ್ ಬಾಬು, ನಗರಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ಅಶೋಕ್ ನಾಯ್ಕ, ನಾಮನಿರ್ದೇಶಿತ ಸದಸ್ಯೆ ಸುಭೇದಾ ಬೂತ್ ಅಧ್ಯಕ್ಷರುಗಳಾದ ನಿತ್ಯಾನಂದ ಶೆಣೈ, ರಮಾನಂದ ಸಾಮಂತ್, ಸ್ಥಳೀಯ ಪ್ರಮುಖರಾದ ವಿಜಯ, ನಟರಾಜ್, ಗುರುರಾಜ್, ಸಂದೇಶ್,ನಿಖಿಲ್ ಮಡಿವಾಳ್ ಮತ್ತಿತರರು ಉಪಸ್ಥಿತರಿದ್ದರು. ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಕಾರ್ಯಕ್ರಮ ನಿರೂಪಿಸಿದರು.




































