ತಮಿಳಿನ ಖ್ಯಾತ ನಟ ವಿವೇಕ್ ವಿಧಿವಶರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಶುಕ್ರವಾರ ಮಧ್ಯಾಹ್ನವಷ್ಟೇ ಹೃದಯಾಘಾತ ಸಂಭವಿಸಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಐಸಿಯು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ಹಾಸ್ಯ ಕಲಾವಿದನಾಗಿ ಮಿಂಚಿದ ವಿವೇಕ್ : ಹಾಸ್ಯ ನಟನಾಗಿ ಜನಪ್ರಿಯತೆ ಗಳಿಸಿದ್ದ ವಿವೇಕ್ ರನ್ನು ಕೆ.ಬಾಲಚಂದರ್ ಚಿತ್ರರಂಗಕ್ಕೆ ಪರಿಚಯಿಸಿದರು. ತಮಿಳು, ತೆಲುಗು ಚಿತ್ರಗಳಲ್ಲಿ ಸಕ್ರಿಯರಾಗಿದ್ದ ಅವರು ಕನ್ನಡದ ಚಂದ್ರ ಚಿತ್ರದಲ್ಲಿ ನಟಿಸಿದ್ದಾರೆ. ಪದ್ಮಶ್ರೀ ಪ್ರಶಸ್ತಿ, ಫಿಲಂಫೇರ್ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ವಿವೇಕ್ ಕಲಾಸೇವೆಗೆ ಲಭಿಸಿವೆ.