ಬೆಂಗಳೂರು : ರಾಜ್ಯದ 5 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉಡುಪಿಯಲ್ಲಿ ಗುಡುಗು, ಸಿಡಿಲು ಸಹಿತ ಮಳೆ
ಉಡುಪಿ ಜಿಲ್ಲೆಯ ಹಲವೆಡೆಗಳಲ್ಲಿ ಮಂಗಳವಾರ ಮಧ್ಯಾಹ್ನದ ವೇಳೆ ಭಾರೀ ಮಳೆಯಾಗದೆ. ಗುಡುಗು, ಮಿಂಚಿನಾರ್ಭಟ ಜೋರಾಗಿತ್ತು. ಕಟಪಾಡಿ, ಕಾಪು, ಕುಂದಾಪುರ ಮೊದಲಾದೆಡೆ ಉತ್ತಮ ಮಳೆಯಾಗಿದೆ.
Advertisement. Scroll to continue reading.


ಏಪ್ರಿಲ್ 25ರ ವರೆಗೂ ಮಳೆ
ರಾಜ್ಯದಲ್ಲಿ 25 ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಭಾಗ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಇಂದು ಕೂಡ ಮಳೆಯಾಗಲಿದೆ ಎಂದು ಹೇಳಲಾಗಿದೆ.




































