ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಕೇರಳದಲ್ಲಿ ಏ.28 ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಹಳು, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ದಾರವಾಡ, ಗದಗ, ಹಾವೇರಿ, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ವಿಜಯಪುರದಲ್ಲಿ ಬೀಳಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.