ರಾಜ್ಯದ ಹಲವಾರು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗುತ್ತಿದೆ. ಹೀಗಾಗಿ ದೇಶಾದ್ಯಂತ ಹಲವಾರು ದುರ್ಘಟನೆಗಳು ನಡೆಯುತ್ತಿವೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಇಲಾಖೆ ಅದರ ಸುಪರ್ದಿಗೆ ಬರುವ ಹಲವಾರು ಪಿಹೆಚ್ ಸಿ ಗಳ ಮೂಲಕ ರಾಜ್ಯದ 28 ಕಡೆ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ನಿರ್ಮಿಸಲು ಅನುಮೋದನೆ ಕೊಟ್ಟಿದ್ದು, ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕುಂದಾಪುರದಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದು ನಿಮಿಷಕ್ಕೆ 1000 ಲೀ ಆಕ್ಸಿಜನ್ ಉತ್ಪಾದನಾ ಘಟಕ, ಉಡುಪಿ ಜಿಲ್ಲೆಯ ಕುಂದಾಪುರ ನಿಮಿಷಕ್ಕೆ 500 ಲೀ. ಆಕ್ಸಿಜನ್ ಉತ್ಪಾದನೆ ಮಾಡುವ ಘಟಕವನ್ನು ನಿರ್ಮಿಸಲು ಅವಕಾಶ ಕೊಟ್ಟಿದ್ದಾರೆ. ಮ ಬೀದರ್ ಜಿಲ್ಲೆಯ ಬಾಲ್ಕಿ, ಬಸವ ಕಲ್ಯಾಣ, ಹುಮ್ನಾಬಾದ್, ಔರಾಬಾದ್ ನಿಂದ ಚಾಮರಾಜನಗರ ಜಿಲ್ಲೆಯ ವರೆಗೆ ಬೇರೆ ಬೇರೆ ಕಡೆಗಳಲ್ಲಿ ಘಟಕಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.
ಈಗಾಗಲೇ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಇಲಾಖೆಯ ಅಧಿಕಾರಿಗಳು ಸ್ಥಳ ಪರೀಕ್ಷೆಯನ್ನು ಮಾಡುತ್ತಿದ್ದಾರೆ. 11 ಜಿಲ್ಲಾ ಕೇಂದ್ರಗಳಲ್ಲಿ ಒಂದು ನಿಮಿಷಕ್ಕೆ 1000 ಲೀಟರ್ ನ ಘಟಕಗಳು, 17 ತಾಲೂಕು ಆಸ್ಪತ್ರೆಯ ಕೇಂದ್ರಗಳಲ್ಲಿ ನಿಮಿಷಕ್ಕೆ 500 ಲೀ. ಆಕ್ಸಿಜನ್ ಉತ್ಪಾದಿಸುವ ಘಟಕಗಳನ್ನು ಕೇಂದ್ರ ನಿರ್ಮಿಸುತ್ತಿದೆ. ಆಕ್ಸಿಜನ್ ಕೊರತೆ ಉಂಟಾಗುತ್ತಿರುವ ಈ ಸಂದರ್ಭದಲ್ಲಿ ಘಟಕಗಳನ್ನು ಮಾಡುತ್ತಿರುವುದು ಮುಂದಾಲೋಚನೆಯಿಂದ ಮೂರನೇ ಅಲೆಗೆ ಇಂತಹ ತಯಾರಿ ನಡೆಸುತ್ತಿರುವುದು ಅಭಿನಂದನೀಯ ಎಂದು ತಿಳಿಸಿದ್ದಾರೆ.



































