ಚೆನ್ನೈ : ಸಿಬಿಐ ಮಾಜಿ ಅಧಿಕಾರಿ ಕೆ. ರಗೋಥಮನ್ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ತಂಡದಲ್ಲಿದ್ದರು. ಅನೇಕ ಪುಸ್ತಕಗಳನ್ನು ಬರೆದಿದ್ದು, ಸಿಬಿಐನಲ್ಲಿ ಪೊಲೀಸ್ ಅಧೀಕ್ಷಕರಾಗಿ ನಿವೃತ್ತರಾಗಿದ್ದರು.
ಇತ್ತೀಚೆಗೆ ಕೊರೋನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ.