ಬೆಂಗಳೂರು : ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಮೃತಪಟ್ಟಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಕೋವಿಡ್ ಸೋಂಕು ತಗುಲಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
1975ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮಕ್ಕೆ ಪದಾರ್ಪಣೆ ಮಾಡಿದ ಅವರು, ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಹೊರಳು ನೋಟ ಅಂಕಣ ಬರೆಯುತ್ತಿದ್ದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಸೇವೆ ಸಲ್ಲಿಸಿರುವ ಅವರು `ಈ ಬಾನುವಾರ’ ಪತ್ರಿಕೆಯ ಸಂಪಾದಕರಾಗಿದ್ದರು.
ಮಹದೇವ ಪ್ರಕಾಶ್ ರವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಮೊದಲಾದವರು ಸಂತಾಪ ಸೂಚಿಸಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, journalist, Mahadev Prakash
Click to comment

































