ಮುಂಬೈ : ತೌಕ್ತೆ ಚಂಡಮಾರುತದ ಹೊಡೆತಕ್ಕೆ ಸಿಲುಕಿ ಮುಂಬೈನಿಂದ 35 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಬಾರ್ಜ್ ಪಿ -305 ಮುಳುಗಿದ ಎರಡು ದಿನಗಳ ನಂತರ ಇಪ್ಪತ್ತೆರಡು ಮಂದಿಯ ಮೃತದೇಹ ಪತ್ತೆಯಾಗಿದೆ. 65 ಮಂದಿ ನಾಪತ್ತೆಯಾಗಿದ್ದಾರೆ. ಒಟ್ಟು 186 ಜನರನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ. ಶೋಧ ಕಾರ್ಯಾಚರಣೆಯು ಇನ್ನೂ ಮುಂದುವರೆದಿದೆ.
ಸೇನೆಯ ಕಮಾಂಡರ್ ಆಪರೇಷನ್ಸ್ ನ ನೇವಲ್ ಕಮಾಂಡ್ ಎಂ.ಕೆ. ಝಾ ಅವರು ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಆದರೆ ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಹಾಗೆಯೇ ಈ ಎಲ್ಲಾ ಸಾವುಗಳು ಬಾರ್ಜ್ ಪಿ -305 ಮುಳುಗಡೆಯಿಂದಲೇ ಸಂಭವಿಸಿದೆಯೇ ಎಂದು ದೃಢಪಡಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.