ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿ ಐಜಿಪಿ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಅವರು ನಕ್ಸಲ್ ನಿಗ್ರಹ ಪಡೆ ಕಾರ್ಕಳ ಇವರಿಗೆ ಇಲಾಖೆ ವತಿಯಿಂದ ನೀಡಿದ ಆಕ್ಸಿಜನ್ concentrator ಯಂತ್ರವನ್ನು ನಕ್ಸಲ್ ನಿಗ್ರಹ ಪಡೆಯ ಉಡುಪಿಯ ಡಿಐಜಿಪಿ ಚೇತನ್ ಆರ್ ಹಾಗೂ ಪೋಲಿಸ್ ಅಧೀಕ್ಷಕ ನಿಕಿಲ್ ಬಿ ಇವರ ಮಾರ್ಗದರ್ಶನದಲ್ಲಿ ನಕ್ಸಲ್ ಪೀಡಿತ ಪ್ರದೇಶದಲ್ಲಿರುವ ಹೆಬ್ರಿಯ ಸರ್ಕಾರಿ ಆಸ್ಪತ್ರೆಗೆ ಸೋಮವಾರ ನೀಡಲಾಯಿತು. ಈ ಸಂದರ್ಭದಲ್ಲಿ ನಕ್ಸಲ್ ನಿಗ್ರಹ ಪಡೆಯ ಡಿವೈಎಸ್ಪಿ ಜೈಶಂಕರ್, ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂತೋಷ್ ಕುಮಾರ್, ಎನ್ ಎಫ್ ನ ಅಧಿಕಾರಿಗಳಾದ ಸುನೀಲ್ ಕುಮಾರ್, ದೇಜಪ್ಪ , ವಸಂತ ಅಕ್ಕಸಾಲಿ ಮತ್ತು ಸಿಬ್ಬಂದಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು .
Advertisement. Scroll to continue reading.



































