ಮೈಸೂರು : ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಹೀಗಾಗಿ ಮೇ 29 ರಿಂದ ಜೂನ್ 7 ರವರೆಗೆ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಹಾಲಿನ ಪಾರ್ಲರ್ ಗಳು, ವೈದ್ಯಕೀಯ ಸೇವೆಗಳು, ಹಾಪ್ ಕಾಮ್ಸ್ ಗಳು ಮಾತ್ರ ತೆರೆಯಬಹುದಾಗಿದೆ ಎಂದು ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ವಾರದಲ್ಲಿ ಎರಡು ದಿನ ವಕಾಶ ನೀಡಲಾಗಿದೆ. ಸೋಮವಾರ ಹಾಗೂ ಗುರುವಾರ ಬೆಳಿಗ್ಗೆ 6 ರಿಂದ 12 ರ ವರೆಗೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಸುವುದು ಕಡ್ಡಾಯ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ
ಜಿಲ್ಲಾ ತಹಶೀಲ್ದಾರ್ ಗಳು, ಜಿಲ್ಲಾ ಹಾಗೂ ತಾಲ್ಲೂಕುಗಳ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಈ ತೀರ್ಮಾನ ಕೈಗೊಳ್ಳಲಾಗಿದೆ.
Advertisement. Scroll to continue reading.



































