ಥಾಣೆ : ಮಹಾನಗರ ಪಾಲಿಕೆಯ ಉಲ್ಲಾಸ್ ನಗರದಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದು 7 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕಟ್ಟಡ ಕುಸಿತ ಸಂಭವಿಸಿದ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ರಕ್ಷಣಾ ಪಡೆಗಳು ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಳೆದ ವರ್ಷ ಸಪ್ಟೆಂಬರ್ ತಿಂಗಳಲ್ಲಿ ಮಹಾರಾಷ್ಟ್ರದ ಭಿವಾಂಡಿಯಲ್ಲಿ 36 ವರ್ಷಗಳ ಹಳೆಯ ಕಟ್ಟಡ ಕುಸಿದು ಭಾರೀ ದುರಂತ ಸಂಭವಿಸಿತ್ತು. ಘಟನೆಯಿಂದ 44 ಮಂದಿ ಪ್ರಾಣ ಬಿಟ್ಟಿದ್ದರು.