ನವದೆಹಲಿ : ಸಿಬಿಎಸ್ ಇ 12 ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಪರೀಕ್ಷೆಗಳು ಇರುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಸಿಬಿಎಸ್ ಇ 12 ನೇ ತರಗತಿ ಪರೀಕ್ಷೆ ನಡೆಸಬೇಕೇ ಬೇಡವೇ ಎಂಬ ಬಗ್ಗೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಅಧಿಕಾರಗಳೊಂದಿಗೆ ಸಭೆ ನಡೆಯಿತು. ಈ ವೇಳೆ ಪರೀಕ್ಷೆ ನಡೆಸದೇ ಇರುವ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Advertisement. Scroll to continue reading.