ಉತ್ತರ ಪ್ರದೇಶ : ಗೊಂಡಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಂಗಳವಾರ ರಾತ್ರಿ ನಿಗೂಢ ಸ್ಪೋಟ ಸಂಭವಿಸಿದೆ. ಪರಿಣಾಮ ಏಳು ಮಂದಿ ಸಾವಿಗೀಡಾಗಿದ್ದಾರೆ. ಸ್ಪೋಟದಿಂದಾಗಿ ಎರಡು ಮಹಡಿಯ ಕಟ್ಟಡವೊಂದು ಕುಸಿದಿದೆ. ಸ್ಪೋಟಕ್ಕೆ ಕಾರಣ ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಎಲ್ ಪಿ ಜಿ ಸಿಲಿಂಡರ್ ಸ್ಪೋಟಗೊಂಡಿರಬಹುದೆಂದು ಅಂದಾಜಿಸಲಾಗಿದೆ. ಮೃತಪಟ್ಟವರಲ್ಲಿ ಮೂವರು 5 ರಿಂದ 12 ವರ್ಷ ವಯಸ್ಸಿನ ಮಕ್ಕಳಿದ್ದು, ಏಳು ಮಂದಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.
ಸ್ಪೋಟದ ಶಬ್ದಕ್ಕೆ ಸ್ಥಳೀಯರು ಬೆಚ್ಚಿ ಮನೆ ಹಿಂದೆ ಹೊರಗೆ ಓಡಿ ಬಂದಿದ್ದಾರೆ. ಕುಸಿದು ಬಿದ್ದ ಕಟ್ಟಡದ ಕೆಳಗೆ ಸಿಲುಕಿದ್ದ ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.