ಬೆಂಗಳೂರು : ದ್ವಿತಿಯ ಪಿಯುಸಿ ರದ್ದು ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಎಲ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು 9 ನೇ ತರಗತಿ ಪರೀಕ್ಷೆ ಬರೆಯದಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 120 ಅಂಕಗಳಿಗೆ 3 ಗಂಟೆಯ ಪರೀಕ್ಷೆ ನಡೆಸಲಾಗುವುದು. ಆರೋಗ್ಯ ಇಲಾಖೆಯೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬಹು ಆಯ್ಕೆ ಮಾದರಿಯಲ್ಲಿ ಪರೀಕ್ಷೆ ನಡೆಯಲಿದೆ. ಕನ್ನಡ , ಇಂಗ್ಲೀಷ್, ಹಿಂದಿಗೆ 1 ಪರೀಕ್ಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನಕ್ಕೆ ಒಂದು ಪರೀಕ್ಷೆ ನಡೆಸಲಾಗುವುದು. ಯಾರನ್ನೂ ಫೇಲ್ ಮಾಡುವುದಿಲ್ಲ. ವ್ಯಾಕ್ಸಿನೇಟೆಡ್ ಟೀಚರ್ಸ್ ಗಳಿಗೆ ಮಾತ್ರ ಎಕ್ಸಾಂ ಡ್ಯೂಟಿ ಇರಲಿದೆ ಎಂದು ಹೇಳಿದ್ದಾರೆ. ವಲಸೆ ಹೋಗಿರುವ ವಿದ್ಯಾರ್ಥಿಗಳಿಗೆ ಇರುವಲ್ಲೇ ಪರೀಕ್ಷೆ ಬರೆಯುವ ಅವಕಾಶ ಕೊಡಲಾಗುವುದು. ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಸಲಾಗುವುದು. 20 ದಿನದ ಮುಂಚೆ ಪರೀಕ್ಷಾ ದಿನಾಂಕ ತಿಳಿಸಲಾಗುವುದು ಎಂದರು.
ಜುಲೈ ಕೊನೆಯ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಸಿ ಬಿ ಎಸ್ ಇ, ಐ ಸಿ ಎಸ್ ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಗುರುವಾರ 12 ನೇ ತರಗತಿ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿತ್ತು. ಇದೀಗ ಕರ್ನಾಟಕದಲ್ಲೂ ರದ್ದು ಮಾಡಲಾಗಿದೆ. ಹಾಗಾಗಿ ಕೊರೋನಾ ಭೀತಿಯ ನಡುವೆ ಪರೀಕ್ಷೆ ಬರೆಯುವ ಚಿಂತೆಯಲ್ಲಿದ್ದ ದ್ವಿತಿಯ ವಿದ್ಯಾರ್ಥಿಗಳಿಗೆ ರಿಲೀಫ್ ಸಿಕ್ಕಿದೆ.
