ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ಗ್ರಾ.ಪಂ ಗಳನ್ನು ಸೀಲ್ ಡೌನ್ ಮಾಡಿರುವುದು ಪರಿಣಾಮಕಾರಿಯಾಗಿದೆ. ಮಂಗಳವಾರ ಸಭೆ ನಡೆಸಿ ಯಾವ್ಯಾವ ಪಂ. ಹಾಗೂ ಪುರಸಭೆ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಬೇಕೆಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಶನಿವಾರ ನಗರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರಕಾರದ ಆದೇಶದಂತೆ ಲಸಿಕಾ ಕೇಂದ್ರವನ್ನು ತೆರೆಯಲಾಗಿದೆ. ಅರ್ಹರಿಗೆ ಮಾತ್ರ ಲಸಿಕೆ ದೊರೆಯಕಬೇಕೆಂಬ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಲಸಿಕಾ ಕೇಂದ್ರದಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದ್ದು, ಲಸಿಕಾ ಕೇಂದ್ರದ ಉಸ್ತುವಾರಿ ಈ ನೋಡಲ್ ಅಧಿಕಾರಿಯವರದಾಗಿರುತ್ತದೆ ಎಂದು ಹೇಳಿದರು.


ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಡಿವೈಎಸ್ಪಿ ಶ್ರೀಕಾಂತ್ ಕೆ., ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ, ವ್ಯಾಕ್ಸಿನ್ ಕೇಂದ್ರದ ನೋಡಲ್ ಅಧಿಕಾರಿ ದಿನಕರ್ ಶೆಟ್ಟಿ, ಕಂದಾಯ ನಿರೀಕ್ಷಕ ದಿನೇಶ್ ಹುದ್ದಾರ್, ಸಾರ್ವಜನಿಕ ಆಸ್ಪತ್ರೆಯ ಡಾ. ರಶ್ಮಿ ಹಾಗೂ ಸಿಬ್ಬಂದಿಗಳು, ಕುಂದಾಪುರ ಸಹಾಯಕ ಉಪನಿರೀಕ್ಷಕ ಅಶೋಕ್, ಗೃಹರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

































