ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ರೈಲು ಡಿಕ್ಕಿಯಾಗಿ ಚಿರತೆಯೊಂದು ಮೃತಪಟ್ಟ ಘಟನೆ ಶನಿವಾರ ಬೆಳಿಗ್ಗೆ ಸೇನಾಪುರ ವ್ಯಾಪ್ತಿಯ ಕುಂದಬಾರಂದಾಡಿಯಲ್ಲಿ ನಡೆದಿದೆ. ರಾಜಧಾನಿ ಹೆಸರಿನ ರೈಲು ಮೂರು ವರ್ಷ ಪ್ರಾಯದ ಗಂಡು ಚಿರತೆಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಿರತೆ ತಲೆಗೆ ಗಂಭೀರ ಗಾಯಗಳಾಗಿದ್ದು, ಪರಿಣಾಮ ಮೃತಪಟ್ಟಿದೆ ಎನ್ನಲಾಗಿದೆ.
ಕುಂದಾಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
Advertisement. Scroll to continue reading.