ಕಾಪು : ಟಿಪ್ಪರ್ ಮಗುಚಿ ಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಪಡುಬಿದ್ರಿ ಸಮೀಪದ ಮುದರಂಗಡಿ ರಸ್ತೆಯಲ್ಲಿ ನಡೆದಿದೆ.
ಮೃತರನ್ನು ಪಕ್ಷಿಕೆರೆ ನಿವಾಸಿ ಹರೀಶ್ (35) ಎಂದು ಗುರುತಿಸಲಾಗಿದೆ. ಟಿಪ್ಪರ್ ನಲ್ಲಿ ಮಣ್ಣು ಸಾಗಿಸುತ್ತಿದ್ದು, ಖಾಲಿ ಮಾಡುತ್ತಿರುವ ವೇಳೆ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಹರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಈ ಮೊದಲು ಬಸ್ಸು ಚಾಲಕನಾಗಿ ದುಡಿಯುತ್ತಿದ್ದರು ಎನ್ನಲಾಗಿದೆ.
Advertisement. Scroll to continue reading.