ಮುಂಬೈ : ನಾಲ್ಕು ಅಂತಸ್ತಿನ ಕಟ್ಟಡ ಕುಸಿದು 11 ಜನ ಮೃತಪಟ್ಟಿರುವ ಘಟನೆ ಮುಂಬೈ ನಗರದ ಪಶ್ಚಿಮ ಭಾಗದ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಬುಧವಾರ ತಡರಾತ್ರಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮತ್ತೊಂದು ಕಟ್ಟಡದ ಮೇಲೆ ಬಿದ್ದಿ. ಪರಿಣಾಮ 6 ಮಕ್ಕಳು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ.
ರಕ್ಷಣಾ ಕಾರ್ಯ ಮುಂದುವರೆದಿದ್ದು, ಅವಶೇಷಗಳಡಿ ಸಿಲುಕಿರುವವರ ಹುಡುಕಾಟ ಕಾರ್ಯ ಮುಂದುವರೆದಿದೆ. 18 ಮಂದಿಯನ್ನು ರಕ್ಷಿಸಲಾಗಿದ್ದು, ಹಲವರು ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement. Scroll to continue reading.