ಬೆಂಗಳೂರು : ಕೊರೋನಾ ಸೋಂಕನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು. ಆದರೆ, ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಖ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ಇಳಿಕೆ ಕಂಡಿಲ್ಲ. ಹಾಗಾಗಿ 8 ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ, ಮೈಸೂರು, ಹಾಸನ, ತುಮಕೂರು, ಶಿವಮೊಗ್ಗ, ಮಂಡ್ಯ, ಬೆಳಗಾವಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಇದೆ.
ಇಂದು ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಅವರು, ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ ಎನ್ನಲಾಗಿದೆ.