Connect with us

Hi, what are you looking for?

Diksoochi News

Uncategorized

ಕುಸ್ತಿಪಟು ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

0

ನವದೆಹಲಿ : ಕೊಲೆ ಪ್ರಕರಣದಲ್ಲಿ ಬಂಧಿಯಾಗಿರುವ ಒಲಿಂಪಿಕ್ಸ್ ಪದಕ ವಿಜೇತ ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಜೂ.25 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ದೆಹಲಿ ಕೋರ್ಟ್ ಆದೇಶ ನೀಡಿದೆ.
ಯುವ ರೆಸ್ಲರ್ ಸಾಗರ್ ರಾಣಾ ಧಂಕರ್ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಜೂ.2 ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅದಕ್ಕೂ ಮೊದಲು 10 ದಿನಗಳ ಕಾಲ ದೆಹಲಿ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದುಕೊಂಡು ಪ್ರಕರಣದ ವಿಚಾರಣೆಯನ್ನು ನಡೆಸಿದ್ದರು. ಇದೀಗ ನ್ಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಮೇ 4 ರಂದು ದೆಹಲಿಯ ಛತ್ರಾಸಲ್ ಕ್ರೀಡಾಂಗಣದಲ್ಲಿ ಸಾಗರ್ ಧಂಕರ್ ಹತ್ಯೆ ನಡೆದಿತ್ತು. ಘಟನೆ ನಡೆದ ಬಳಿಕ ಸುಶೀಲ್ ಕುಮಾರ್ ತಲೆಮರೆಸಿಕೊಂಡಿದ್ದರು. ಬಳಿಕ ಮೇ 23ರ ಬೆಳಿಗ್ಗೆ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಶೀಲ್ ಕುಮಾರ್ ಅವರು ದೆಹಲಿ ಪೊಲೀಸರು ಬಂಧಿಸಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!