ಕಾಪು: ಉಚ್ಚಿಲ ಬಡಾ ಗ್ರಾಮದ ಭಾಸ್ಕರನಗರ ನಿವಾಸಿ ಪಿ.ಕೆ. ಬಾವ ಎಂಬವರ ಮನೆ ಮೇಲೆ ತೆಂಗಿನ ಮರ ಬಿದ್ದು, ಮನೆ ಜಖಂಗೊಂಡಿದೆ.
ಇಂದು ರಾತ್ರಿ ಬೀಸಿದ ಜೋರು ಗಾಳಿ, ಬಿರುಸಿನ ಮಳೆಗೆ ತೆಂಗಿನ ಮರ ಮನೆ ಮೇಲೆ ಉರುಳಿ ಬಿದ್ದು, ತಗಡು ಚಪ್ಪರಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಧಾವಿಸಿದ ಗ್ರಾಮ ಪಂಚಾಯಿತಿ ಸದಸ್ಯ ರಫೀಕ್ ಎಸ್.ಕೆ. ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಲಾಯಿತು.