ಮಂಗಳೂರು : ಕರಾವಳಿಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಪರಿಣಾಮ ಬಜ್ಪೆಯ ಮರವೂರು ಸೇತುವೆ ಬಿರುಕು ಕಂಡಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಯ ಸೇತುವೆಯಲ್ಲಿ ಬಿರುಕು ಕಂಡಿದೆ. ಮರವೂರು ಸೇತುವೆ ಬಳಿ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಒಂದೇ ಭಾಗದಲ್ಲಿ ನೀರಿನ ಹರಿವು ಹೆಚ್ಚಾಗಿತ್ತು. ಸೇತುವೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ಸೇತುವೆಯ ಒಂದು ಭಾಗದ ಪಿಲ್ಲರ್ ಕುಸಿದು ಸೇತುವೆಗೆ ಹಾನಿಯಾಗಿದೆ. ಪರಿಣಾಮ ಮಂಗಳೂರಿನಿಂದ ವಿಮಾನ ನಿಲ್ದಾಣ ಭಾಗಕ್ಕೆ ಸಂಚಾರ ಸ್ಥಗಿತವಾಗಿದೆ.

ಉಡುಪಿ ಯಿಂದ ಬರುವವರು ಮೂಲ್ಕಿ ತಿರುವು ಪಡೆದು ಕಿನ್ನಗೋಳಿ-ಕಟೀಲು ರಸ್ತೆಯಾಗಿ, ಮಂಗಳೂರು ನಗರದಿಂದ ಬರುವವರು ನಂತೂರಿನಲ್ಲಿ ತಿರುವು ಪಡೆದು ಕುಲಶೇಖರ ಗುರುಪುರ ರಸ್ತೆಯಾಗಿ ತೆರಳಲು ಸೂಚಿಸಲಾಗಿದೆ.
Advertisement. Scroll to continue reading.
