ಬೆಂಗಳೂರು : ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕೆಲವೆಡೆ ಸಿಡಿಲು, ಗುಡುಗು ಸಹಿತ ಗಾಳಿ ಮಳೆಯಾಗುತ್ತಿದೆ. ಪರಿಣಾಮ ಹಲವೆಡೆ ಹಾನಿಗಳಾಗಿರುವ ಬಗ್ಗೆ ವರದಿಯಾಗಿದೆ.
ಜೂ. 21ರ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ, ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರಕನ್ನಡ, ಬೆಳಗಾವಿ, ಕಲಬುರಗಿ, ಬೀದರ್, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.