ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಜೂನ್ 28 ರಿಂದ ಕರ್ನಾಟಕದ ಕರಾವಳಿಯ ಭಾಗದ ಹಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜೂ. 28 ರಿಂದ ಜು.1 ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹೇಳಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 29 ರಿಂದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕ ಮಗಳೂರು ಜಿಲ್ಲೆಗಳಲ್ಲೂ ಕೂಡ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.
Advertisement. Scroll to continue reading.