ವರದಿ : ಬಿ.ಎಸ್.ಆಚಾರ್ಯ
ಉಡುಪಿ : ನಾನಾ ಇಲಾಖೆಯ ಅಧಿಕಾರಿಗಳನ್ನು ಮಾತೃ ಇಲಾಖೆಯಾದ ಕಂದಾಯ ಇಲಾಖೆಯ ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡಿರುವುದನ್ನು ವಿರೋಧಿಸಿ ಕಂದಾಯ ಇಲಾಖಾ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆ ಹಾಗೂ ಕಂದಾಯ ಇಲಾಖೆ, ಗ್ರಾಮ ಲೆಕ್ಕಾಧಿಕಾರಿಯವರ ಸಂಘ ಉಡುಪಿ ಜಿಲ್ಲಾ ಶಾಖೆಯ ಪದಾಧಿಕಾರಿಗಳು ರಾಜ್ಯಮುಖ್ಯ ಕಾರ್ಯದರ್ಶಿ ಅವರಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರ ಮೂಲಕ ಬುಧವಾರ ಮನವಿ ನೀಡಿದರು.
ಮುಂದಿನ ದಿನಗಳಲ್ಲಿ ಬೇರೆ ಇಲಾಖೆಯ ಅಧಿಕಾರಿಗಳನ್ನು ಮಾತೃ ಇಲಾಖೆಯ ತಹಶೀಲ್ದಾರ್ ಹುದ್ದೆಗೆ ನೇಮಿಸಬಾರದು ಎಂದು ಮನವಿ ಮಾಡಲಾಯಿತು. ಸಂಘಟನೆಯ ಉಡುಪಿ ಜಿಲ್ಲೆಯ ಪದಾಧಿಕಾರಿಗಳು ನಿಯೋಗದಲ್ಲಿದ್ದರು.
Advertisement. Scroll to continue reading.