Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ : ಕೋಳಿ ಅಂಕಕ್ಕೆ ದಾಳಿ; ನಾಲ್ಕು ಮಂದಿ ವಶಕ್ಕೆ

0

ಹೆಬ್ರಿ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿದ್ದ 4 ಮಂದಿಯನ್ನು ವಶಕ್ಕೆ ಪಡೆದಿರುವ ಘಟನೆ ಬುಧವಾರ ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮದ ಮಾರಾಳಿ ಕಂಬ್ಲಿಬೆಟ್ಟು ಎಂಬಲ್ಲಿ ನಡೆದಿದೆ.

ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದು, ಉಳಿದವರು ಪರಾರಿಯಾಗಿದ್ದಾರೆ. ಕೋವಿಡ್‌-19 ನಿಯಮ ಉಲ್ಲಂಘಿಸಿ ಕೋಳಿ ಅಂಕವನ್ನು ನಡೆಸುತ್ತಿದ್ದರು. ಸುಮಾರು 7 ರಿಂದ 8 ಜನರು ಕೋಳಿಗಳ ಕಾಲಿಗೆ ಹರಿತವಾದ ಬಾಳುಗಳನ್ನು ಕಟ್ಟಿ ಅವುಗಳಿಗೆ ಹಿಂಸೆಯಾಗುವಂತೆ  ಕಾಳಗ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

04 ಹುಂಜಗಳನ್ನು, 1,120 ರೂಪಾಯಿ ಹಾಗೂ ಎರಡು ಬಾಳುಗಳನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!