ಕಾಪು: ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಉಡುಪಿ ಜಿಲ್ಲೆಯ ಗಡಿಭಾಗ ಹೆಜಮಾಡಿಯಲ್ಲಿ ಅದ್ದೂರಿ ಸ್ವಾಗತ ನೀಡುವ ಮೂಲಕ ಜಿಲ್ಲೆಗೆ ಬರಮಾಡಿಕೊಳ್ಳಲಾಯಿತು. ಡಿಕೆ ಶಿವಕುಮಾರ್ ಸ್ವಾಗತಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ರಾ.ಹೆ 66 ರ ಹೆಜಮಾಡಿ ಟೋಲ್ ಗೇಟ್ ಸಮೀಪ ಜಮಾಯಿಸಿದ್ದರು. ಹೆಜಮಾಡಿ ಆಗಮಿಸಿದ ಡಿಕೆಶಿಯವರನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹಾರ ಹಾಕಿ ಹೂ ಗುಚ್ಛ ನೀಡಿ ಗೌರವಿಸಿದರು.


ಕಾಂಗ್ರೆಸ್ ಮುಖಂಡರಾದ ಮಂಜುನಾಥ್ ಬಂಡಾರಿ,ಐವನ್ ಡಿಸೋಜ, ಶಶಿಧರ್ ಹೆಗ್ಡೆ,ನವೀನ್ ಚಂದ್ರ ಸುವರ್ಣ, ನವೀನ್ ಚಂದ್ರ ಜೆ ಶೆಟ್ಟಿ, ದೀಪಕ್ ಇನ್ನ, ರಮೀಝ್ ಹುಸೇನ್,ನವೀನ್ ಡಿ ಸೋಜ, ಸುದೀರ್ ಕರ್ಕೇರ ,ಅಝೀಝ್ ಹೆಜಮಾಡಿ ಹಾಗೂ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಉಪಸ್ಥಿತರಿದ್ದರು.
Advertisement. Scroll to continue reading.



































