Connect with us

Hi, what are you looking for?

Diksoochi News

Uncategorized

ಟೋಕಿಯೋ ಒಲಂಪಿಕ್ಸ್: ಭಾರತದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

0

ಟೋಕಿಯೋ ಒಲಿಂಪಿಕ್ಸ್‌ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು ಎಲ್ಲ ಕ್ರೀಡಾಪಟು ಗಳು ಭರದ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಭಾರತದಿಂದಲೂ ಈ ಪ್ರತಿಷ್ಟಿತ ಕ್ರೀಡಾಕೂಟದಲ್ಲಿ ಭಾಗಿಯಾಗುವ ಕ್ರೀಡಾಪಟುಗಳ ಹೆಸರುಗಳನ್ನು ಬಹುತೇಕ ಅಂತಿಮಗೊಳಿಸಲಾಗಿದೆ. ಜಪಾನ್‌ಗೆ ತೆರಳುವ ಮುನ್ನ ಕ್ರೀಡಾಪಟುಗಳೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂವಾದವನ್ನು ನಡೆಸಲಿದ್ದಾರೆ.

ಭಾರತ ದೇಶವನ್ನು ಪ್ರತಿನಿಧಿಸುವ ಎಲ್ಲಾ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಜುಲೈ 13 ರಂದು ಸಂಜೆ 5 ಗಂಟೆಗೆ ವರ್ಚುವಲ್ ವೇದಿಕೆಯಲ್ಲಿ ಸಂವಾದವನ್ನು ನಡೆಸಲಿದ್ದಾರೆ.

ಭಾರತದಿಂದ ಸುಮಾರು 120ಕ್ಕೂ ಅಧಿಕ ಕ್ರೀಡಾಪಟುಗಳು ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ. ಆದರೆ ಭಾರತೀಯ ಒಲಿಂಪಿಕ್ಸ್ ಅಸೋಸಿಯೇಶನ್ ಈ ಬಾರಿಯ ಕ್ರೀಡಾಕೂಟದಲ್ಲಿ ಭಾಗಿಯಾಗುವ ಆಟಗಾರರ ಅಂತಿಮ ಪಟ್ಟಿಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ. ದೇಶದ ಪ್ರತಿಯೊಬ್ಬರು ಕೂಡ ಈ ಪ್ರತಿಷ್ಟಿತ ಕ್ರೀಡಾಕೂಟದಲ್ಲಿ ಭಾಗಿಯಾಗುವ ಭಾರತದ ಕ್ರೀಡಾಪಟುಗಳಿಗೆ ಪ್ರೋತ್ಸಾಹವನ್ನು ನೀಡಬೇಕು ಎಂದು ತಿಂಗಳಾಂತ್ಯದಲ್ಲಿ ನಡೆಸಿದ ‘ಮನ್‌ ಕೀ ಬಾತ್’ ಕಾರ್ಯಕ್ರಮದಲ್ಲಿಯೂ ಪ್ರಧಾನಿ ಮನವಿಯನ್ನು ಮಾಡಿದ್ದರು .

Advertisement. Scroll to continue reading.

ಜುಲೈ 23ರಿಂದ ಟೋಕಿಯೋದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟ ಆರಂಭವಾಗಲಿದ್ದು, ಆಗಸ್ಟ್ 8ರಂದು ತೆರೆ ಕಾಣಲಿದೆ. ಈ ಭಾರಿ ಪ್ರೇಕ್ಷಕರಿಲ್ಲದೆ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!