ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಶಿವಪುರ ಗ್ರಾಮದ ಮುಳ್ಳುಗುಡ್ಡೆ ರಾಜು ಪೂಜಾರಿ ಅವರ ಮನೆಯಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿದ್ದು, ಇದರಿಂದ ಅಪಾರ ಮಟ್ಟದ ಹಾನಿ ಸಂಭವಿಸಿದೆ. ಮನೆಯವರು ಮತ್ತು ಅಕ್ಕಪಕ್ಕದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಆ ಹೊತ್ತಿಗೆ ಮನೆಯಲ್ಲಿರುವ ಎಲ್ಲಾ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಹೆಬ್ರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Advertisement. Scroll to continue reading.