ನವದೆಹಲಿ : ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದಂತಹ ನೀಟ್-2021ರ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 12ಕ್ಕೆ ಪರೀಕ್ಷೆಗೆ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಈ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, NEET(UG)-2021ರ ಪರೀಕ್ಷೆಯನ್ನು ಸೆಪ್ಟೆಂಬರ್ 12ರಂದು ನಡೆಸಲಾಗುತ್ತಿದೆ. ಕೊರೋನಾ ಸೋಂಕಿನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುತ್ತಿದೆ. ನಾಳೆ ಸಂಜೆ 5 ಗಂಟೆಯಿಂದ ಅರ್ಜಿ ಸಲ್ಲಿಕೆ NTA ವೆಬ್ ಸೈಟ್ ಮೂಲಕ ಆರಂಭಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.