ಉಡುಪಿ : ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಾಗಲಿದ್ದು, ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಮುದ್ರ ಪ್ರಕ್ಷ್ಯುಬ್ಧವಾಗಿರುವುದರಿಂದ ಬೀಚ್ ಗೆ ಆಗಮಿಸುವ ಪ್ರವಾಸಿಗರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಮತ್ತು ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ಸಂಪರ್ಕಿಸಬಹುದು. ಎಲ್ಲ ಸರ್ಕಾರಿ ಅಧಿಕಾರಿಗಳ ರಜೆಯನ್ನು ರದ್ದುಗೊಳಿಸಲಾಗಿದೆ. ಎಲ್ಲಾ ಅಧಿಕಾರಿಗಳೂ ಕೇಂದ್ರ ಸ್ಥಾನದಲ್ಲಿ ಅಲರ್ಟ್ ಆಗಿರಬೇಕೆಂದು ಉಡುಪಿಯ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
Advertisement. Scroll to continue reading.