ಕಟಪಾಡಿ: ಬುಧವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಬಹಳ ವರ್ಷ ಹಿಂದಿನ ಮರವೊಂದು ಉರುಳಿ ಬಿದ್ದು ವಿದ್ಯುತ್ ಟ್ರಾನ್ಸ್ಪಾರ್ಮರ್ ಕಂಬ ಹಾನಿಯಾಗಿ ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ವಿಶ್ವನಾಥ ಕ್ಷೇತ್ರದ ಮುಂಭಾಗದಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿದೆ. ಈ ವೇಳೆ ಪಕ್ಕದಲ್ಲಿದ್ದ ವಿದ್ಯುತ್ ಟ್ರಾನ್ಸ್ಪಾರ್ಮರ್ ಕಂಬ ಹಾಗು ಮನೆಯೊಂದು ಹಾನಿಗೊಳಗಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ತೆರವು ಕಾರ್ಯ ನಡೆಯುತ್ತಿದ್ದು, ನಿರಂತರವಾಗಿ ಸುರಿಯುವ ಮಳೆಯಿಂದಾಗಿ ತೆರವು ಕಾರ್ಯಕ್ಕೆ ಅಡಚಣೆಯಾಗಿದೆ.

ವಿಶ್ವನಾಥ ಕ್ಷೇತ್ರದ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ರಾತ್ರಿಯಿಡೀ ಜನರು ಕತ್ತಲೆಯಲ್ಲಿ ಕಳೆಯುವಂತಾಗಿದೆ. ಕ್ಷೇತ್ರದ ಮುಂಭಾಗದಲ್ಲಿರುವ ಈ ಮರ ಎರಡು ಮನೆಗಳ ನಡುವೆ ಬಿದ್ದ ಕಾರಣ ಯಾವುದೇ ಜೀವಹಾನಿ ಆಗಿಲ್ಲ.
Advertisement. Scroll to continue reading.

In this article:Diksoochi news, diksoochi Tv, diksoochi udupi, katapadi, udupi rain damage

Click to comment