ಬೆಂಗಳೂರು : ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯನ್ನು ರಾಜ್ಯ ಸರಕಾರ ಘೋಷಣೆ ಮಾಡುವ ನಿರೀಕ್ಷೆಯಲಿತ್ತು. ಆದರೆ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಡಿಸೆಂಬರ್ ವರೆಗೆ ಮುಂದೂಡುವ ನಿರ್ಣಯವನ್ನು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು 2021ರ ಡಿಸೆಂಬರ್ ವರೆಗೆ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸದಿರಲು ನಿರ್ಧರಿಸಿದೆ ಎಂದು
ಸಚಿವ ಸಂಪುಟ ಸಭೆಯ ಬಳಿಕ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚುನಾವಣೆಯ ಬಗ್ಗೆ ಡಿಸೆಂಬರ್ ನಂತರ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ಮಾಹಿತಿ ನೀಡಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, jilla panchayath election, thalukpanchayath
Click to comment

































