ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿರುವ ಘಟನೆ ಶಿವಪುರ ಗ್ರಾಮದ ಬಿಲ್ ಬೈಲು ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.
ಶಿವಮೊಗ್ಗದಿಂದ ಉಡುಪಿಗೆ ಸಾಗುತ್ತಿದ್ದ ಖಾಸಗಿ ಮಿನಿ ಬಸ್ ಮತ್ತು ಶಿವಪುರದಿಂದ ಹೆಬ್ರಿ ಕಡೆ ಸಾಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಸ್ಥಳೀಯ ಬೈಕ್ ಸವಾರನು ಕಾರೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಗಡೆಯಿಂದ ಬಂದ ಬಸ್ಸಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಬಸ್ಸಿನ ಚಾಲಕ ಬೈಕ್ ಸವಾರನ ಪ್ರಾಣ ಉಳಿಸಲು ಹೋಗಿ ಬಸ್ಸು ರಸ್ತೆ ಬದಿಗೆ ವಾಲಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬೈಕ್ ಸವಾರನಿಗೆ ಕೈಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಹೆಬ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಈ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ .
Advertisement. Scroll to continue reading.

In this article:Diksoochi news, diksoochi Tv, diksoochi udupi, hebri accident, shivapura

Click to comment