ಬೆಂಗಳೂರು : ರಾಜ್ಯ ಸರ್ಕಾರವು ಜುಲೈ 26 ರಿಂದ ಪದವಿ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿದೆ. ವಿದ್ಯಾರ್ಥಿಗಳು ಕೊರೊನಾ ಲಸಿಕೆ ಮೊದಲ ಡೋಸ್ ಪಡೆದಿರಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ.
ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ತಜ್ಞರ ಸಭೆ ನಡೆಯಿತು. ಈ ವೇಳೆ ರಾಜ್ಯದಲ್ಲಿ ಚಿತ್ರಮಂದಿರಗಳಲ್ಲಿ ಶೇ. 50 ರಷ್ಟು ಪ್ರೇಕ್ಷಕರೊಂದಿಗೆ ಚಿತ್ರಮಂದಿರಗಳ ಓಪನ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಜುಲೈ 26 ರಿಂದ ಪದವಿ ತರಗತಿಗಳು ಆಫ್ ಲೈನ್ ಕ್ಲಾಸ್ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಅಲ್ಲದೇ ನಾಳೆಯಿಂದ ನೈಟ್ ಕರ್ಪ್ಯೂನಲ್ಲೂ ಬದಲಾವಣೆ ಮಾಡಲಾಗಿದ್ದು. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿದೆ.
Advertisement. Scroll to continue reading.