Connect with us

Hi, what are you looking for?

Diksoochi News

ಕರಾವಳಿ

ಕಾಪು : ಕೋವಿಡ್ ಮಧ್ಯೆಯೂ ಸಂಪೂರ್ಣ ಸುರಕ್ಷತೆಯೊಂದಿಗೆ ಮೂಳೂರು ಅಲ್ ಇಹ್ಸಾನ್ ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

0

ಕಾಪು: ಕೋವಿಡ್‌ ಸಂಕಷ್ಟದ ಮಧ್ಯೆಯೂ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಸೋಮವಾರ ಮೂಳೂರು ಅಲ್ ಇಹ್ಸಾನ್ ವಿದ್ಯಾ ಸಂಸ್ಥೆಯಲ್ಲಿ ವ್ಯವಸ್ಥಿತವಾಗಿ ಪೂರ್ವ ಸಿದ್ದತೆಯೊಂದಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.

ಸರಕಾರದ ಮಾರ್ಗಸೂಚಿಯಂತೆ ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ನಿಯಮಾವಳಿಗಳನ್ನು ಪಾಲಿಸಿಲಾಗಿದ್ದು,ಶಿಕ್ಷಣ ಕೇಂದ್ರವನ್ನು ಸಂಪೂರ್ಣ ಸಾನಿಟೈಸ್ ಮಾಡಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿತ್ತು. ಸಾಮಾಜಿಕ ಅಂತರ ಕಾಯ್ದುಕೊಂಡು ವಿದ್ಯಾರ್ಥಿಗಳು ಶಿಕ್ಷಣ ಕೇಂದ್ರಕ್ಕೆ ಆಗಮಿಸಿದ್ದು, ವಿದ್ಯಾರ್ಥಿಗಳಿಗೆ ಸಾನಿಟೈಸರ್ ಹಾಗೂ ಮಾಸ್ಕ್ ನೀಡಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಕೇಂದ್ರದ ಪ್ರಾಂಶುಪಾಲ ಹಬೀಬ್ ರಹಿಮಾನ್, ” ನಮ್ಮ ವಿದ್ಯಾಸಂಸ್ಥೆಯಲ್ಲಿ ಪ್ರಥಮ ಬಾರಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಸರಸ್ವತಿ ಮಂದಿರ ಉಚ್ಚಿಲ, ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆ ಉಚ್ಚಿಲ, ಸಿ.ಎಸ್.ಐ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಜೊತೆಗೆ ಅಲ್ ಇಹ್ಸಾನ್ ಶಾಲೆಯ ವಿದ್ಯಾರ್ಥಿಗಳನ್ನೊಳಗೊಂಡು ಒಟ್ಟು 294 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಉಡುಪಿ ದಕ್ಷಿಣದ ಪರೀಕ್ಷಾ ಕೇಂದ್ರಗಳಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳನ್ನೊಳಗೊಂಡ ಪರೀಕ್ಷಾ ಕೇಂದ್ರ ಇದಾಗಿದೆ ಎಂದರು.

ಈ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸೈಯ್ಯದ್ ಮಹಮ್ಮದ್ ಉಚ್ಚಿಲ, ಮಾಜಿ ಕಾರ್ಯದರ್ಶಿ ಬಸೀರ್ ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!