ಬಂಗಾಳ ಕೊಲ್ಲಿಯಲ್ಲಿ ಒತ್ತಡ ಹೆಚ್ಚಾಗಿರುವ ಕಾರಣ ರಾಜ್ಯದ ಬಹುತೇಕ ಕಡೆ ಈ ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವುದರಿಂದ ಜುಲೈ 20ರಿಂದ 24ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಉಡುಪಿ,ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು. ಜುಲೈ 22ರವರೆಗೂ ಯೆಲ್ಲೂ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement. Scroll to continue reading.