ಮಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಆಸ್ಕರ್ ಕುಟುಂಬಕ್ಕೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಯೋಗ ಮಾಡುತಿರುವಾಗ ಕಾಲು ಜಾರಿ ಬಿದ್ದು, ತೀವ್ರ ಪೆಟ್ಟಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು,ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಮಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಕರ್ ಅವರ ಆರೋಗ್ಯ ವಿಚಾರಿಸಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕರೆ ಮಾಡಿ ಮಾತನಾಡಿ ಆಸ್ಕರ್ ಕುಟುಂಬದವರಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.
Advertisement. Scroll to continue reading.

In this article:congress leader, Diksoochi news, diksoochi Tv, diksoochi udupi, oscar Fernandes, Soniya Gandhi

Click to comment