ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಶೀಘ್ರ ಚೇತರಿಕೆಗೆ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ವಲಯ ಕಾಂಗ್ರೆಸ್ ಪದಾಧಿಕಾರಿಗಳು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕೆ ಹರಿಪ್ರಸಾದ್ ಶೆಟ್ಟಿ, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಮೀನುಗಾರಿಕಾ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಹಿರಿಯಣ್ಣ, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ವಿಕಾಸ್ ಹೆಗ್ಡೆ, ಕುಂದಾಪುರ ಯುವ ಬಿಲ್ಲವ ಸಂಘ ಅಧ್ಯಕ್ಷ ಅಶೋಕ್ ಪೂಜಾರಿ, ನಾರಾಯಣ ಆಚಾರ್ ಕೊಣಿ ಮುಂತಾದವರು ಉಪಸ್ಥಿತರಿದ್ದರು.
Advertisement. Scroll to continue reading.

In this article:Anegudde Temple, Diksoochi news, diksoochi Tv, diksoochi udupi, oscar Fernandes
Click to comment

































