Connect with us

Hi, what are you looking for?

Diksoochi News

ರಾಜ್ಯ

ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಣೆ

0

ಸಿಎಂ ಯಡಿಯೂರಪ್ಪ ರಾಜೀನಾಮೆ ಘೋಷಿಸಿದ್ದಾರೆ. ಮಧ್ಯಾಹ್ನ ಉಪಾಹಾರದ ಬಳಿಕ ರಾಜಭವನಕ್ಕೆ ತೆರಳಿ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ಲೆಟ್ ಹಾಲ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ರಾಜೀನಾಮೆ ಘೋಷಿಸಿದ ಯಡಿಯೂರಪ್ಪ ಅವರು ಭಾವುಕರಾದರು. ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದರು. 75 ವರ್ಷ ದಾಟಿದ ನನಗೆ ಸಿಎಂ ಸ್ಥಾನವನ್ನು ನೀಡಿದ್ದರು. 2 ವರ್ಷ ಆಡಳಿತ ನಡೆಸಲು ಅವಕಾಶ ನೀಡಿದ್ದರು. ಕೇವಲ ಶಬ್ದಗಳಲ್ಲೇ ಅಭಿನಂದನೆ ಸಲ್ಲಿಸುವುದಕ್ಕೆ ಆಗಲ್ಲ ಎಂದು ಅವರು ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ‌.ನಡ್ಡಾ ಅವರಿಗೆ ಅಭಿನಂದನೆ ಸಲ್ಲಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!