ಕುಂದಾಪುರ: ಸೈಕಲ್ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ.
ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ಸಾವನ್ನಪ್ಪಿದ ದುರ್ದೈವಿ.
ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ. ಸೈಕಲ್ ಡಿವೈಡರ್ ಬದಿಯಿಂದ ರಸ್ತೆಯ ಎಡಗಡೆಗೆ ತಿರುಗಿಸಿದ ಪರಿಣಾಮ ಬೈಂದೂರು ಕಡೆಯಿಂದ ಕುಂದಾಪುರದತ್ತ ತೆರಳುತ್ತಿದ್ದ ಕಾರು ಸೈಕಲ್ ಗೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಸೈಕಲ್ನಲ್ಲಿದ್ದ ರಾಮ ಕುಲಾಲ್ ಅವರು ಕೆಲ ದೂರ ಹೋಗಿ ಬಿದ್ದ ಪರಿಣಾಮ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಗಂಗೊಳ್ಳಿಯ ಆಪತ್ಬಾಂಧವ ಆಂಬುಲೆನ್ಸ್ನ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರು. ಆದರೆ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ವರದಿ : ದಿನೇಶ್ ರಾಯಪ್ಪನಮಠ



































